Share this news

ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ತುಲಾಭಾರ ಮಾಡಲಾಗುತ್ತಿದ್ದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ. ತಕ್ಕಡಿಯ ಸರಳು ಪೇಜಾವರ ಶ್ರೀಗಳ ತಲೆಯ ಮೇಲೆ ಕಳಚಿ ಬಿದ್ದ ಪರಿಣಾಮ ತಲೆಗೆ ಚಿಕ್ಕ ಗಾಯವಾಗಿದ್ದು, ಪೇಜಾವರ ಶ್ರೀಗಳು ಅನಾಹುತದಿಂದ ಪಾರಾಗಿದ್ದಾರೆ. ತರಚಿದ ಗಾಯದೊಂದಿಗೆ ಪೇಜಾವರ ಶ್ರೀಗಳು ಸುರಕ್ಷಿತವಾಗಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ.

ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಹತ್ವದ ಧಾರ್ಮಿಕ ಆಚರಣೆಯಾದ ಚಾತುರ್ಮಾಸ್ಯ ಕಾರ್ಯಕ್ರಮ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳಿಗೆ ಭಕ್ತರು ತುಲಾಭಾರ ಸೇವೆ ನಡೆಸುತ್ತಿದ್ದಾಗ ಈ ಅಚಾತುರ್ಯ ನಡೆದಿದೆ.

ಈ ಬಗ್ಗೆ ದೆಹಲಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ತುಲಾಭಾರ ಕಾರ್ಯಕ್ರಮದಲ್ಲಿ ತಕ್ಕಡಿ ಹಗ್ಗ ನನ್ನ ತಲೆಯ ಮೇಲೆ ಕಳಚಿ ಬಿತ್ತು. ಅದರಿಂದಾದ ಗಾಯ ಪೂರ್ಣ ಮಾಸಿಹೋಗಿದೆ. ಗಾಯದ ಕುರುಹು ಸಹ ಇಲ್ಲದಂತೆ ವಾಸಿಯಾಗಿದೆ. ದೊಡ್ಡ ಗಾಯ ಏನೂ ಆಗಿಲ್ಲ, ನಾನು ಆರಾಮವಾಗಿದ್ದೇನೆ. ಯಾರು ಗಾಬರಿಯಾಗಬೇಕಾಗಿಲ್ಲ, ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಹೇಳಿದ್ದಾರೆ.


 

 

 

 

 

 

 

 

Leave a Reply

Your email address will not be published. Required fields are marked *