Share this news

ಹೆಬ್ರಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂ ಸಂಬಂಧಿತ, ವಿದ್ಯಾಭಾರತಿ ವತಿಯಿಂದ ವಿಜ್ಞಾನ ಮೇಳವು ಪಂಜಾಬ್ ನ ಅಮೃತಸರದಲ್ಲಿ ಇತ್ತೀಚೆಗೆ ನಡೆಯಿತು.

ಈ ಸ್ಪರ್ಧೆಯಲ್ಲಿ ಕ್ಷೇತ್ರೀಯ ಮಟ್ಟದಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಪ್ರಣಮ್, ರಾಷ್ಟ್ರ ಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಇವನು ಹೆಬ್ರಿಯ ಚಾರ ನಿವಾಸಿ ಜ್ಯೋತಿ ಮತ್ತು ಗಿರೀಶ್ ಪೂಜಾರಿ ದಂಪತಿಗಳ ಪುತ್ರನಾಗಿದ್ದಾನೆ.
ಹಾಗೂ ವಿಜ್ಞಾನ ಪ್ರದರ್ಶನದಲ್ಲಿ ಸಹಾಯಕನಾಗಿ ಸಹಕರಿಸಿದ 10ನೇ ತರಗತಿಯ ಪವನ್ ಹೆಬ್ಬಾರ್, ಇವರನ್ನು ಆಡಳಿತ ಮಂಡಳಿಯ ಅಧ್ಯಕ್ಷ ಸಿಎ ಎಂ ರವಿರಾವ್, ಕಾರ್ಯದರ್ಶಿ ಗುರುದಾಸ್ ಶೆಣೈ, ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ , ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

 

 

 

 

 

 

 

 

Leave a Reply

Your email address will not be published. Required fields are marked *