Share this news

ಕೋಲಾರ: ರಾಜ್ಯದಲ್ಲಿ ಹಣಕಾಸಿನ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಯಾವುದೇ ಅಡಚಣೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಕೋಲಾರ, ಬಂಗಾರಪೇಟೆ, ಮಾಲೂರು ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಯರಗೋಳ್ ಡ್ಯಾಂ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದ್ದು, ಹೀಗಾಗಿಯೇ ಸರ್ಕಾರ ಯಾವುದೇ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಆದರೆ, ಸರ್ಕಾರದಲ್ಲಿ ಅಂತಹ ಯಾವುದೇ ಸಮಸ್ಯೆಗಳಿಲ್ಲ. ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರದ ಬೊಕ್ಕಸದಲ್ಲಿ ಹಣಕಾಸಿನ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದರು. ನಮ್ಮ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳನ್ನು ನೋಡಿ ವಿರೋಧ ಪಕ್ಷಗಳು ಕಣ್ಣು ತೆರೆಯಬೇಕು ಎಂದು ತಿರುಗೇಟು ನೀಡಿದರು.
2,223 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಉದ್ಘಾಟಿಸಲಾಗಿದೆ,ಒಂದು ವೇಳೆ ಸರ್ಕಾರದ ಬಳಿ ಹಣವಿಲ್ಲದಿದ್ದರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಅಭಿವೃದ್ಧಿ ಕಾರ್ಯಗಳಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು. ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಬಿಡಬೇಕು. ಕಾಂಗ್ರೆಸ್ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲಿ ಎಂದು ಕುಟುಕಿದರು

Leave a Reply

Your email address will not be published. Required fields are marked *