ಉಡುಪಿ: ದೀಪಾವಳಿ ಹಬ್ಬದಂದು ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ್ದ ಆರೋಪಿಯನ್ನು ಕರ್ನಾಟಕ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೇ (35) ಬಂಧಿತ ಆರೋಪಿ. CISF security ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ, ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡುತ್ತಿದ್ದ.
ಆರೋಪಿ ಪ್ರವೀಣ ಚೌಗಲೇ ಉಡುಪಿಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೇವಲ 10 ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ. ಈತನ ಬೆನ್ನು ಬಿದ್ದಿದ್ದ ಪೊಲೀಸರು ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದ ವೇಳೆ ಬಂಧಿಸಿದ್ದಾರೆ. ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಸುತ್ತಿ ಸಿಕ್ಕಿಬಿದ್ದ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿ ಲಭಿಸಿದೆ.
ಉಡುಪಿ ಜಿಲ್ಲೆ ಮಲ್ಪೆ ಠಾಣಾ ವ್ಯಾಪ್ತಿಯ ತೃಪ್ತಿನಗರದಲ್ಲಿ ಭಾನುವಾರ ಬೆಳಗ್ಗೆ ಹಸೀನಾ(46), ಅಫ್ನಾನ್(23), ಅಯ್ನಾಝ್(21) ಹಾಗೂ ಆಸಿಂ(12) ಎಂಬುವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಕೊಲೆಯ ಹಿಂದೆ ವಿವಿಧ ಆಯಾಮಗಳ ಅನುಮಾನವನ್ನು ವ್ಯಕ್ತಪಡಿಸಿ ಕೊಲೆ ಪಾತಕಿಯ ಶೋಧಕ್ಕೆ ಬಲೆ ಬೀಸಿದ್ದರು.
ಹಂತಕ ಪ್ರವೀಣ್ ಅರುಣ್ ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಆತನಿಗೆ ಕೊಲೆಯಾದ ಕುಟುಂಬದ ಅಯ್ನಾಜ್ ಪರಿಚಯವಾಗಿತ್ತು ಎನ್ನಲಾಗಿದೆ. ಅಯ್ನಾಜ್ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದು, ಹಂತಕ ಚೌಗಲೆ ಆಕೆಯಲ್ಲಿ ಅನುರಕ್ತನಾಗಿದ್ದಾನೆಂದು ಹೇಳಲಾಗಿದ್ದು, ಆಕೆ ಆರಂಭದಲ್ಲಿ ಆತನ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರೂ ಬಳಿಕ ದೂರಾಗಿದ್ದಳು ಎನ್ನಲಾಗಿದೆ. ಈ ಹಂತದಲ್ಲಿ ದ್ವೇಷ ಬೆಳೆಸಿಕೊಂಡ ಚೌಗಲೆ ಆಕೆಯ ಕುಟುಂಬವನ್ನೇ ಸರ್ವನಾಶ ಮಾಡಲು ಮುಂದಾಗಿದ್ದ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.
ಕೆಮ್ಮಣ್ಣು ನೇಜಾರಿನ ನಿವಾಸಿ ನೂರ್ ಮಹಮ್ಮದ್ ಅವರ ಕುಟುಂಬದ ಮೇಲೆ ಈ ಭೀಕರ ದಾಳಿ ನಡೆದಿತ್ತು. ನೂರ್ ಮಹಮ್ಮದ್ ಅವರು ದುಬೈಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಅವರ ಪತ್ನಿ ಹಸೀನಾ (45), ಪುತ್ರಿಯರಾದ ಅಫ್ನಾನ್ (23), ಅಯ್ನಾಜ್ (21) ಮತ್ತು ಅಸೀಮ್ (14) ಅವರನ್ನು ಆಗಂತುಕನೊಬ್ಬ ಭಾನುವಾರ ಬೆಳಗ್ಗೆ ಕೊಲೆ ಮಾಡಿದ್ದ. ಅಫ್ನಾನ್ ಅವರು ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರೆ, ಅಯ್ನಾಜ್ ಏರ್ ಹೋಸ್ಟೆಸ್ ಆಗಿ ಕೆಲಸ ಮಾಡುತ್ತಿದ್ದಳು. ಅಸೀಂ ಏಳನೇ ತರಗತಿಯಲ್ಲಿ ಓದುತ್ತಿದ್ದ. ಕುಟುಂಬದ ಹಿರಿಯ ಮಗ ಅಸಾದ್ ಬೆಂಗಳೂರಿನಲ್ಲಿ ಇಂಡಿಗೋ ಏರ್‌ಲೈನ್ಸ್