ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳವಾರ ರಾತ್ರಿ ಉಡುಪಿಯ ಕಟಪಾಡಿ ಜಂಕ್ಷನ್ ಬಳಿ ಸಂಭವಿಸಿದೆ.
ಉಡುಪಿಯ ಪಾಂಗಾಳ ನಿವಾಸಿ ವೃತ್ತಿಯಲ್ಲಿ ಪೈಂಟರ್ ಆಗಿರುವ ಉತ್ತಮ್(55) ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರ ಸಹಕಾರ ಪಡೆದು ಸಮಾಜ ಸೇವಕ ಅಭಿರಾಜ ಸುವರ್ಣ ತನ್ನ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ
ಕಾಪು ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.