Share this news

ಕಾರ್ಕಳ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಕಳ ಇದರ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 16 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು
ಮಂಗಳೂರು ಕೆಎಂಎಫ್ ನಿರ್ದೇಶಕರು ಹಾಗೂ ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ,ಮಕ್ಕಳಿಗೆ ನಾವು ನೀಡುವ ಪ್ರೀತಿ ಮತ್ತು ಕಾಳಜಿಯು ನಾಳೆ ನಮ್ಮ ದೇಶದ ಭವಿಷ್ಯಕ್ಕೆ ಪೂರಕವಾಗುತ್ತದೆ.
ಮಕ್ಕಳ ಮನಸ್ಸು ಯಾವಾಗಲೂ ದೀಪ ಬೆಳಗಿದ ಹಾಗೆ ಬೆಳಗಲಿ, ಮಕ್ಕಳ ಜೊತೆಗೆ ನಮ್ಮೆಲ್ಲರ ಜೀವನೋತ್ಸಾಹ ಇಮ್ಮಡಿಯಾಗಲಿ ಎಂದರು ‌ಸಾಣೂರು ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಉಮಾ ಮಾತನಾಡಿ ಮಣ್ಣಿನ ಮುದ್ದೆಯಂತಿರುವ ಮಕ್ಕಳನ್ನು ಅಂಗನವಾಡಿಯಲ್ಲಿ ಶಾಲಾ ಪೂರ್ವ ಶಿಕ್ಷಣದ ಮೂಲಕ ಅವರ ಭವಿಷ್ಯ ರೂಪಗೊಳ್ಳುವುದು ಎಂದರು.

ಸಾಣೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಪುಲ್ಕೇರಿ ಅಂಗನವಾಡಿಯಲ್ಲಿ ಅತೀ ಹೆಚ್ಚು ಮಕ್ಕಳ ಸಂಖ್ಯೆಯಿದ್ದು, ವರ್ಷವಿಡಿ ಮಕ್ಕಳ ಮನೋವಿಕಾಸಕ್ಕಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಮುದಾಯದ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳುತ್ತಿರುವುದು ಸಂತಸದಾಯಕ ವಿಚಾರಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಪಂಚಾಯತ್ ಉಪಾಧ್ಯಕ್ಷೆ ಯಶೋಧಾ ಶೆಟ್ಟಿ, ಪಂಚಾಯತ್ ಸದಸ್ಯರಾದ ವಸಂತ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಪ್ರಿಯಾ , ಪ್ರಾಥಮಿಕ ಆರೋಗ್ಯ ಇಲಾಖೆ ಇರ್ವತ್ತೂರು ಇಲ್ಲಿಯ ಆರೋಗ್ಯ ಸಹಾಯಕಿ ಸಂಗೀತ ಸಿಎಚ್ಒ ಕುಮಾರಿ ಸಂಧ್ಯಾ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಅಂಗನವಾಡಿ ಶಿಕ್ಷಕಿ ಸಾಕಮ್ಮ ಕಾರ್ಯಕ್ರಮವನ್ನು ನಿರೂಪಿಸಿದರು.
ಅಂಗನವಾಡಿಯ ಪುಟಾಣಿ ಮಕ್ಕಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ, ಕಾರ್ತಿಕ ಮಾಸದ ದೀಪೋತ್ಸವದ ಪ್ರಯುಕ್ತ ಮಣ್ಣಿನ ಹಣತೆಗಳನ್ನು ಬೆಳಗಿ ಶಿಶು ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.

Leave a Reply

Your email address will not be published. Required fields are marked *