ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಲಿಂಗಾಯತ ಸಮುದಾಯದ ನಾಯಕರನ್ನು ಬಳಸಿಕೊಂಡು ಬಳಿಕ ಎಸೆಯುವುದು ಪರಿಪಾಠವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವಿಟರ್ ನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಆರ್.ಅಶೋಕ್ ನೇಮಕ ವಿಚಾರದ ಕುರಿತಂತೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಅಸಮರ್ಥ ವ್ಯಕ್ತಿಯನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿರುವುದು ಬಿಜೆಪಿಯ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಕುಟುಕಿದೆ.
ಇದೀಗ ಪ್ರತಿಪಕ್ಷ ನಾಯಕನ ನೇಮಕದ ಕುರಿತಾಗಿ ಕಾಂಗ್ರೆಸ್ ಟ್ವೀಟ್ ಮಾಡಿ, ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು.ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು ಎಂದಿದೆ. ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು.ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು.
ಈ.ಹಿಂದೆ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ.ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಎಸೆಯಲು ತಂದಿರುವ ಹೊಸ ಹರಕೆಯ ಕುರಿ ಅಷ್ಟೇ ಎಂದು ಕೈ ಪಡೆ ವಾಗ್ದಾಳಿ ನಡೆಸಿದೆ.








