ಬೆಂಗಳೂರು: ನಾಳೆ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರ ಆಗಮನ ತೀವ್ರ ಕುತೂಹಲ ಮೂಡಿಸಿದ್ದು, ನಿಗಮ-ಮಂಡಳಿ ನೇಮಕಾತಿ ಸಂಬಂಧ ಚರ್ಚಿಸೋದಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ನಾಳೆ(ಮಂಗಳವಾರ) ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಸಲಿರುವ ಸುರ್ಜೇವಾಲ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಸಿದ್ದರಾಮಯ್ಯ ಅವರು 25 ಶಾಸಕರ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ. ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಸುರ್ಜೇವಾಲ ನೇತೃತ್ವದಲ್ಲಿ ನಡೆಯುವ ಈ ಸಭೆ ಮಹತ್ವ ಪಡೆದುಕೊಂಡಿದೆ.
ನಾಳೆಯೇ ನಿಗಮ-ಮಂಡಳಿ ನೇಮಕಾತಿ ನೇಮಕಾತಿ ಸಂಬಂಧ ಸಿಎಂ, ಡಿಸಿಎಂ ಜೊತೆಗೆ ಮಹತ್ವದ ಚರ್ಚೆ ನಡೆಸಲಿರುವ ರಣದೀಪ್ ಸುರ್ಜೇವಾಲ,ನಾಳಿನ ಸಭೆಯಲ್ಲೇ ಪಟ್ಟಿ ಅಂತಿಮಗೊಳಿಸಲಿದ್ದಾರೆ ಎನ್ನಲಾಗುತ್ತಿದೆ.


















