ಕಾರ್ಕಳ; ಕಾರ್ಕಳ ತಾಲೂಕಿನ ನೂತನ ತಹಶೀಲ್ದಾರ್ ಆಗಿ ನರಸಪ್ಪ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ತಹಶೀಲ್ದಾರ್ ಆಗಿದ್ದ ಅನಂತಶಂಕರ ಅವರು ನೂತನ ತಹಶೀಲ್ದಾರ್ ನರಸಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅನಂತಶಂಕರ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕಲಾ ಗೆ ವರ್ಗಾವಣೆಯಾಗಿದ್ದು, ತೆರವಾದ ಸ್ಥಾನಕ್ಕೆ ಬೀದರ್ ತಾಲೂಕಿನಲ್ಲಿ ಪ್ರೊಬೆಷನರಿ ತಹಶೀಲ್ದಾರ್ ಆಗಿದ್ದ ನರಸಪ್ಪ ಅವರು ಕಾರ್ಕಳ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ