ಬೆಂಗಳೂರು:ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು ಪ್ರಾಯೋಗಿಕ ಚಾಲನೆ ನೀಡಲಾಗುತ್ತಿದೆ.
ಚೆನ್ನೈನಿಂದ ಎಂಟು ಬೋಗಿಗಳ ರೈಲು ಸೆಟ್ ಪ್ರಯಾಣಿಕರ ಸೇವೆಗೆ ನೀಡಲಾಗಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲು ಓಡಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದು ಮಂಗಳವಾರ ಹುಬ್ಬಳ್ಳಿ-ಧಾರವಾಡ ಮೂಲಕ ಕೆಎಸ್‌ಆರ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ಪ್ರಾಯೋಗಿಕ ಓಡಾಟಕ್ಕೆ ನಿಯೋಜಿಸಲು ಉದ್ದೇಶಿಸಲಾಗಿದೆ.
ಬೆಂಗಳೂರಿನ ಹೆಚ್ಚುವರಿ ವಿಭಾಗೀಯ ರೈಲ್ವೇ ಮ್ಯಾನೇಜರ್ (ಆಡಳಿತ) ಕುಸುಮಾ ಹರಿಪ್ರಸಾದ್ ಅವರು ಚೆನ್ನೈನಿಂದ ರೈಲು ಸೆಟ್ ಅನ್ನು ಪ್ರಾಯೋಗಿಕ ಚಾಲನೆಯಲ್ಲಿ ಓಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಾಯೋಗಿಕ ಚಾಲನೆಯಲ್ಲಿ, ರೈಲು ಕೆಎಸ್ಆರ್ ಬೆಂಗಳೂರಿನಿಂದ ಬೆಳಿಗ್ಗೆ 5.45 ಕ್ಕೆ ಹೊರಟು ಮಧ್ಯಾಹ್ನ 1.30 ಕ್ಕೆ ಬೆಳಗಾವಿ ತಲುಪುತ್ತದೆ. ಹಾಗೂ ಅದು ಬೆಳಗಾವಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ರಾತ್ರಿ 10.10 ಕ್ಕೆ ಕೆಎಸ್‌ಆರ್ ಬೆಂಗಳೂರಿಗೆ ಆಗಮಿಸುತ್ತದೆ.ಬಳಿಕ ಯಶವಂತಪುರದಿಂದ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್‌ಗೆ ರಾತ್ರಿಯ ವಂದೇ ಭಾರತ್ ವಿಶೇಷ ರೈಲು ಸೆಟ್ ಅನ್ನು ಓಡಿಸಲಾಗುವುದು. ಮಂಗಳವಾರ ರಾತ್ರಿ 11 ಗಂಟೆಗೆ ಯಶವಂತಪುರದಿಂದ ಹೊರಟು ಬುಧವಾರ ಬೆಳಗ್ಗೆ 4.30ಕ್ಕೆ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರಿನಿಂದ ಬೆಳಗಾವಿಯ ನಡುವಿನ 610 ಕಿ.ಮೀ ಅಂತರವನ್ನು ಕ್ರಮಿಸಲು 7 ಗಂಟೆ 45 ನಿಮಿಷಗಳನ್ನು ತೆಗೆದುಕೊಳ್ಳಲಿದೆ. ಪ್ರಸ್ತುತ ವೇಗದ ರೈಲಿಗಿಂತ ಎರಡು ಗಂಟೆಗಳಿಗಿಂತ ಹೆಚ್ಚು ವೇಗವಾಗಿರುತ್ತದೆ.ಆದರೆ ಹಿಂತಿರುಗುವಾಗ ಈ ರೈಲು 8 ಗಂಟೆ 10 ನಿಮಿಷ ತೆಗೆದುಕೊಳ್ಳಲಿದೆ


















