ಬೆಂಗಳೂರು:ಜಾತಿ ಗಣತಿಗೆ ಸಂಬAಧಿಸಿದ ಮೂಲ ವರದಿಯೇ ಕಾಣೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ ಪತ್ರ ಬರೆದಿದ್ದಾರೆ.
ಅವರು ಬರೆದಿರುವ ಪತ್ರದಲ್ಲಿ ದಿನಾಂಕ 26,08, 2021 ರಂದು ಆಯೋಗದ ಕಛೇರಿಯಲ್ಲಿರಿಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳು ಹಾಗೂ ಇತರ ವಿವರಗಳನ್ನೊಳಗೊಂಡ ಸೀಲ್ಡ್ ಬಾಕ್ಸ್ಗಳನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿಯವರ ಸಮ್ಮುಖದಲ್ಲಿ ಮಹಜರು ನಡೆಸಿ ತೆರೆಯಲಾಗಿರುತ್ತದೆ. ಮುದ್ರಿತ ಮುಖ್ಯವರದಿಯಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದಿರುವುದು ಆಯೋಗವು ಗಮನಿಸಿರುತ್ತದೆ. ಇದರೊಂದಿಗೆ ಅದಕ್ಕೆ ಸಂಬAಧಿಸಿದ ಮುಖ್ಯ ವರದಿಯ ಮೂಲ ಅಥವಾ ಹಸ್ತಪ್ರತಿ ಸೀಟ್ ಬಾಕ್ಸಿನಲ್ಲಿ ಲಭ್ಯವಿಲ್ಲದಿರುವುದರಿಂದ ಸದರಿ ಹಸ್ತಪ್ರತಿಯನ್ನು ಕೂಡಲೇ ಆಯೋಗದ ಕಛೇರಿಗೆ ಸಲ್ಲಿಸಲು ಸಂಬAಧಪಟ್ಟ ಅಧಿಕಾರಿಗೆ ಸೂಚಿಸಲಾಗಿತ್ತು. ಸದರಿಯವರು ಸೂಚನೆಗೆ ಉತ್ತರವನ್ನು ನೀಡಿದ್ದು, ಅವರ ಪ್ರತಿಯನ್ನು ಲಗತ್ತಿಸಿದೆ. ಸದರಿ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುತ್ತಿದ್ದು, ಮುಂದೆ ಈ ವಿಷಯಕ್ಕೆ ಸಂಬAಧಪಟ್ಟAತೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಹಂತದಲ್ಲಿ ಸ್ಪಷ್ಟ ಪಡಿಸುವಂತೆ ಕೋರುತ್ತೇನೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ ಪತ್ರ ಬರೆದಿದ್ದಾರೆ.


















