ನವದೆಹಲಿ:ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ( CWRC) ಸೂಚನೆ ನೀಡಿದೆ.
ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ್ಕೆ ನಿರಂತರ ಹಿನ್ನಡೆಯಾಗುತ್ತಿದ್ದು,ಇದೀಗ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಆದರೂ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ.
ಇತ್ತೀಚೆಗೆ ನವೆಂಬರ್ 1ರಿಂದ 23ವರೆಗೆ ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿತ್ತು, ಇದೀಗ ಮತ್ತೆ ನವೆಂಬರ್ 23 ರಿಂದ ಡಿ.23 ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ನಿರ್ದೇಶನ ನೀಡಿದೆ.