ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರವು ಪಂಚಭೂತಗಳಲ್ಲಿ ಲೀನವಾಯಿತು.
ದೆಹಲಿಯಿಂದ ಸೇನಾ ವಿಮಾನದ ಮೂಲಕ ಪ್ರಾಂಜಲ್ ಅವರ ಮೃತದೇಹವನ್ನು ಬೆಂಗಳೂರಿನಲ್ಲಿರುವ ಪೋಷಕರಿಗೆ ಹಸ್ತಾಂತರಿಸಲಾಯಿತು. ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಪುಷ್ಪಗುಚ್ಚವಿರಿಸಿ ಶ್ರದ್ದಾಂಜಲಿ ಅರ್ಪಿಸಿದರು. ಬ್ರಾಹ್ಮಣ ಸಂಪ್ರದಾಯದAತೆ ಅಂತ್ಯಸAಸ್ಕಾರ ನಡೆಸಿದ್ದು, ಪ್ರಾಂಜಲ್ ಅವರ ತಂದೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಬAಧಿಕರು, ಸೇನಾಧಿಕಾರಿಗಳು ಸೇರಿ ನೆರದಿದ್ದ ಅಪಾರ ಅಭಿಮಾನಿಗಳು ವೀರ ಯೋಧನಿಗೆ ಕಣ್ಣೀರಿನ ವಿದಾಯ ಸಮರ್ಪಿಸಿದರು