Share this news

ಬೆಳಗಾವಿ (ಸುವರ್ಣಸೌಧ) :ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಎಂದೇ ಕರೆಸಿಕೊಳ್ಳುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರು ದಕ್ಷಿಣ ಕರ್ನಾಟಕ ಭಾಗದ ನಾಯಕರ ಗುಲಾಮರಲ್ಲ ಎನ್ನುವುದನ್ನು ಹೈಕಮಾಂಡ್ ಅರ್ಥ ಮಾಡಿಕೊಳ್ಳಬೇಕು. ಉತ್ತರ ಕರ್ನಾಟಕದವರಿಗೆ ನಾಯಕತ್ವ ನೀಡಿ ನ್ಯಾಯ ಒದಗಿಸುವವರೆಗೂ ಪಕ್ಷದ ಶಾಸಕಾಂಗ ಸಭೆಗೂ ನಾನು ಹೋಗುವುದಿಲ್ಲ ಎಂದರು.
ದೇಶದಲ್ಲಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ,ಈಗಾಗಲೇ ತೆಲಂಗಾಣದಲ್ಲಿ ಕುಟುಂಬ ರಾಜಕಾರಣವನ್ನು ಕಿತ್ತು ಹಾಕಲಾಗಿದೆ. ಲೋಕಸಭಾ ಚುನಾವಣೆಯ ಬಳಿಕ ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಕೊನೆಯಾಗಲಿದೆ. ವಂಶ ರಾಜಕಾರಣವನ್ನು ಕೊನೆಗಣಿಸುವುದೇ ನಮ್ಮ ಗುರಿ ಎನ್ನುವ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶಕ್ಕೆ ನರೇಂದ್ರ ಮೋದಿ ಅವರೇ ಗ್ಯಾರಂಟಿ ಇರುವುದರಿಂದ ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವಿಗೆ ಕಾರಣ ಹಿಂದುತ್ವ, ಅಭಿವೃದ್ಧಿ, ಹೊಂದಾಣಿಕೆ ಇಲ್ಲದ ರಾಜಕಾರಣವಾಗಿದೆ. ಪ್ರಾಮಾಣಿಕರು, ಹಿಂದೂ ವಿಚಾರಧಾರೆಯನ್ನು ಹೊಂದಿರುವವರು ಆಡಳಿತ ನಡೆಸಬೇಕು. ವಂಶವಾದ ನಿರ್ಮೂಲನೆ ಮಾಡುವುದೇ ನಮ್ಮ ಗುರಿ. ಇನ್ನು ಮೇಲೆ ಬದಲಾವಣೆ ಆಗಲಿದೆ. ಲೋಕಸಭೆ ಚುನಾವಣೆ ಮುಗಿದ ಮೇಲೆ ಬದಲಾವಣೆ ಆಗಲಿದೆ ಎಂದರು. ನಮಲ್ಲೇ ಇರುವ ಕೆಲ ವೈರಿಗಳನ್ನು ನನ್ನ ವಿರುದ್ಧ ನಿಲ್ಲಿಸಲಾಯಿತು ಹಾಗೂ ನನ್ನನ್ನು ಸೋಲಿಸಲು ವಿವಿಧಡೆಯಿಂದ ಸಾಕಷ್ಟು ಹಣ ಹರಿದು ಬಂತು ಎಂದು ಯತ್ನಾಳ್ ಆರೋಪಿಸಿದರು.

Leave a Reply

Your email address will not be published. Required fields are marked *