ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಒಂದು ಚಿತ್ರವೊಂದನ್ನು ಇಟ್ಟುಕೊಂಡು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಖಂಡನೀಯ ಎಂದು ಕರ್ನಾಟಕ ಮುಸ್ಲಿಂ ಯುನಿಟಿ ಪ್ರಧಾನ ಕಾರ್ಯದರ್ಶಿ
ಖಾಸಿಂ ಸಾಬ್,ಎ ಹೇಳಿದ್ದಾರೆ.
ಸುನ್ನಿ ಜಮಾತ್ನ ಮುಖಂಡರು, ಹಿರಿಯ ಸಮಾಜ ಸೇವಕರು, ಜಾತ್ಯತೀತ ಮನೋಭಾವದ ಧಾರ್ಮಿಕ ಪಂಡಿತರು ಆಗಿರುವ ತನ್ವೀರ್ ಪೀರಾ ರವರ ಕುರಿತು ಯತ್ನಾಳರ ತೇಜೋವಧೆ ಹೇಳಿಕೆಯನ್ನು ಕರ್ನಾಟ. ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸುತ್ತದೆ.
ಯತ್ನಾಳ್ ಅಪಪ್ರಚಾರ ಮಾಡುತ್ತಿರುವ ತನ್ವೀರ್ ಪೀರಾ ರವರ ಫೋಟೋಗಳಲ್ಲಿ ಒಂದು ಬಾಗ್ದಾದಿನ ಪ್ರಿನ್ಸ್ ಶೇಖ್ ಖಾಲಿದ್ ಅವರ ಜತೆಗಿನ ಫೋಟೋ ಹಾಗೂ ಮತ್ತೊಂದು ಫೋಟೋದಲ್ಲಿ ಇರುವವರು ಇರಾಕ್ ಸರ್ಕಾರದ ಸೆಕ್ಯುರಿಟಿ ಆಫೀಸರ್ ಆಗಿರುವ ಸಜ್ಜಾದೇ ನಶೀನ್ ಹಜ್ರತ್ ಗೌಸ್ ಆಜಂ ರವರ ಜತೆಗೆ ತನ್ವೀರ್ ಪೀರಾ ರವರು ಇರುವ ಹತ್ತು ವರ್ಷಗಳ ಹಿಂದಿನ ಫೋಟೋಗಳು. ಇವುಗಳನ್ನೇ ತಿರುಚಿ ಬಳಸಿ ಐಸಿಸ್ ಬೆಂಬಲಿಗರು ಮತ್ತು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ತನ್ವೀರ್ ಪೀರಾರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಅಪಪ್ರಚಾರದ ಹಿಂದೆ ಮುಸ್ಲಿಂ ವಿರೋಧಿ ಭಾವನೆ , ಶಾಂತಿಕದಡುವ ಉದ್ದೇಶ ಯತ್ನಾಳ್ ಹೊಂದಿದ್ದಾರೆ.
ಈ ಕೂಡಲೇ ಕರ್ನಾಟಕ ಸರಕಾರ ಬಿಜೆಪಿ ಸಚಿವ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಮುಸ್ಲಿಂ ಯುನಿಟಿ ಒತ್ತಾಯಿಸುತ್ತಿದೆ.
ಮುಸ್ಲಿಂ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಸ್ಲಿಮ್ ಸಮುದಾಯದ ರಕ್ಷಣೆ ನಮ್ಮ ಸರಕಾರದ ಜವಾಬ್ದಾರಿ ಹಾಗೂ ಮುಂದಿನ ದಿನಗಳಲ್ಲಿ ಅವರ ಅಭಿವೃದ್ಧಿಗೆ ಹತ್ತು ಸಾವಿರ ಕೋಟಿಗಳನ್ನು ಮೀಸಲು ಇರಿಸುವುದಾಗಿ ಘೋಷಣೆ ಮಾಡಿದ್ದು ಸ್ವಾಗತಾರ್ಹ.
ಅಲ್ಲದೇ, ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿಯನ್ನು ಮರು ಸ್ಥಾಪಿಸಬೇಕು. ಓಬಿಸಿ ಯೊಳಗಿನ ಮುಸ್ಲಿಮರ ಶೇ.4 ರಷ್ಟು ಇರುವ ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕೆಂದು ಕರ್ನಾಟಕ ಮುಸ್ಲಿಂ ಯುನಿಟಿ ಸರಕಾರವನ್ನು ಒತ್ತಾಯಿಸುತ್ತಿದೆ ಎಂದು ಖಾಸಿಂ ಸಾಬ್ ಹೇಳಿದ್ದಾರೆ