ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಹಾಗೂ ಪೂರ್ವ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ಅಂತರ್ ಕಾಲೇಜ್ ಮಟ್ಟದ ಸಾಂಸ್ಕೃತಿ ಸ್ಪರ್ಧೆ ತರಂಗ ಸಾಂಸ್ಕೃತಿಕ ಅಲೆಗಳ ಕಲರವ 2023 ಸಾಂಸ್ಕತಿಕ ವೈಭವವು ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಯುವ ಉದ್ಯಮಿ ಅರುಣ್ ಕುಮಾರ್ ನಿಟ್ಟೆ ಉದ್ಘಾಟಿಸಿದರು.
ಕಾಲೇಜು ಪ್ರಾಂಶುಪಾಲ ಡಾ.ಕಿರಣ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸದ ಸ್ಪರ್ಧೆಯ ಪ್ರಥಮ ಬಹುಮಾನವನ್ನು ಎಂ.ಜಿ.ಎಂ ಕಾಲೇಜು ಉಡುಪಿ ಹಾಗೂ ದ್ವಿತೀಯ ಬಹುಮಾನವನ್ನು ಪೂರ್ಣಪ್ರಜ್ಞಾ ಉಡುಪಿ ಹಾಗೂ ದ್ವಿತೀಯ ಬಹುಮಾನವನ್ನು ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಪಡೆದುಕೊಂಡಿತು.
ಈ ಸಂದರ್ಭದಲ್ಲಿ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಆಚಾರ್ಯ, ಸಾಂಸ್ಕೃತಿಕ ಸ್ಪರ್ಧೆಯ ಸಂಯೋಜಕರಾದ ಅಕ್ಷತಾ ರಾವ್ ಹಾಗೂ ವಿದ್ಯಾಧರ ಹೆಗ್ಡೆ, ನವೀನ್ ಸಂತೋಷ್ ಸಂದೀಪ್ ಹೆಗ್ಡೆ ವಿದ್ಯಾರ್ಥಿ ಅಜಿತ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು










