Share this news

ನವದೆಹಲಿ: ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸೋಮವಾರ ದೂರಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ ಮಂಡಿಸಿದೆ. 

ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ಮಸೂದೆಯನ್ನು ಮಂಡಿಸಿದರು. ಈ ಮಸೂದೆಗ ಕಳೆದ ಆಗಸ್ಟ್‌ನಲ್ಲಿ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.ಪ್ರಸ್ತಾವಿತ ಮಸೂದೆಯು ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ, ಯಾವುದೇ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಬಹುದು, ನೆಟ್‌ವರ್ಕ್‌ಗಳು ಅಥವಾ ಅವುಗಳ ಘಟಕಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು, ನಿರ್ವಹಿಸಲು ಅಥವಾ ಅಮಾನತುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡಲಾಗಿದೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

 

ಪ್ರಸ್ತಾವಿತ ಶಾಸನವು ನಿರ್ದಿಷ್ಟ ವ್ಯಕ್ತಿಗಳಿಂದ ಕಳುಹಿಸಲಾದ ಅಥವಾ ಸ್ವೀಕರಿಸಿದ ನಿರ್ದಿಷ್ಟ ದೂರಸಂಪರ್ಕ ಸಾಧನಗಳ ಮೂಲಕ ಅಥವಾ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದ ಕೆಲವು ಸಂದೇಶಗಳನ್ನು “ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತೆ ಇರಬಾರದು” ಎಂದು ಸೂಚನೆ ನೀಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡುತ್ತದೆ

ಕರಡು ಕಾಯಿದೆಯೂ ಹೀಗೆ ಹೇಳುತ್ತದೆ: “ವಿಪತ್ತು ನಿರ್ವಹಣೆ ಸೇರಿದಂತೆ ಯಾವುದೇ ಸಾರ್ವಜನಿಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಥವಾ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ವಿಶೇಷವಾಗಿ ಅಧಿಕಾರ ಪಡೆದ ಯಾವುದೇ ಅಧಿಕಾರಿ, ಅಧಿಸೂಚನೆಯ ಮೂಲಕ ಯಾವುದೇ ಅಧಿಕೃತ ಘಟಕದ ಯಾವುದೇ ದೂರಸಂಪರ್ಕ ಸೇವೆ ಅಥವಾ ದೂರಸಂಪರ್ಕ ಜಾಲವನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸಿಕೊಳ್ಳಬಹುದು ಅಥವಾ ಸ್ಥಗಿತಗೊಳಿಸಬಹುದು.

Leave a Reply

Your email address will not be published. Required fields are marked *