Share this news

ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿ ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್ ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಈಗಾಗಲೇ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ. ವಿವಿಧ ಹುದ್ದೆಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವವರನ್ನು ಒಳಗುತ್ತಿಗೆಗೆ ಒಳಪಡಿಸುವ ಕುರಿತು ನಿಯಮಗಳಲ್ಲಿ ಅವಕಾಶಗಳಿರುವ ಬಗ್ಗೆ ಪರಿಶೀಲಿಸಿ ಇದೇ ಡಿಸೆಂಬರ್ 29ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *