Share this news

ಹೈದರಾಬಾದ್ : ಹೈದರಾಬಾದ್ ಅಂಕುರಾ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಬೆಂಕಿ ಕಟ್ಟಡಕ್ಕೆ ಹಬ್ಬುತ್ತಿದ್ದಂತೆಯೇ ಆಸ್ಪತ್ರೆಯ ಆಡಳಿತ ಮಂಡಳಿಯು ತಕ್ಷಣವೇ ರೋಗಿಗಳನ್ನು ಆಸ್ಪತ್ರೆಯಿಂದ ಶಿಫ್ಟ್ ಮಾಡಿದೆ‌
ಆಸ್ಪತ್ರೆಯ ಮೇಲಿನ ಮಹಡಿಯಲ್ಲಿ ಈ ಘಟನೆ ನಡೆದಿರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಲಿಫ್ಟ್ ಬಳಸಿ ರೋಗಿಗಳನ್ನು ಸುರಕ್ಷಿತವಾಗಿ ಹೊರಗಡೆ ಕರೆತರುತ್ತಿದ್ದಾರೆ.
ಟೆರೇಸ್‌ನಲ್ಲಿ ಹಾಕಲಾಗಿದ್ದ ಹೊರಾಂಗಣ ದೀಪಗಳಿಂದ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿ ಬೆಂಕಿ ಹೊತ್ತಿಕೊಂಡಿವೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ತಕ್ಷಣವೇ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಆಸ್ಪತ್ರೆ ತಿಳಿಸಿದೆ. ಆದರೆ ಬೆಂಕಿಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ‌

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *