Share this news

ನವದೆಹಲಿ: ದೇಶದಾದ್ಯಂತ ಕ್ರಿಸ್’ಮಸ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಸಮಸ್ತ ಕ್ರಿಶ್ಚಿಯನ್ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಕ್ರಿಸ್ಮಸ್ ಹಬ್ಬದ ಕುರಿತು ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಮೇರಿ ಕ್ರಿಸ್ಮಸ್ ಶುಭಾಶಯಗಳು. ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಸೌಹಾರ್ದತೆ ಮತ್ತು ಸಹಾನುಭೂತಿಯ ಚೈತನ್ಯವನ್ನು ಸಂಕೇತಿಸುವ ಕ್ರಿಸ್ ಮಸ್ ಹಬ್ಬವನ್ನು ಆಚರಿಸೋಣ. ಇಂದು ಕ್ರಿಸ್ತನ ಉದಾತ್ತ ಬೋಧನೆಗಳನ್ನು ಸ್ಮರಿಸೋಣ ಎಂದು ಹೇಳಿದ್ದಾರೆ. ಈ ಹಬ್ಬವು ಸಾಮರಸ್ಯ, ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಸಾರುತ್ತದೆ. ನಾವು ಯೇಸುಕ್ರಿಸ್ತನ ಬೋಧನೆಗಳನ್ನು ನೆನಪಿಸೋಣ. ಎಲ್ಲರ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ಸಂಕಲ್ಪ ಮಾಡೋಣ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಕ್ರಿಸ್’ಮಸ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾತ್ರಿಯಿಂದಲೇ ಚರ್ಚ್’ಗಳಿಗೆ ತೆರಳಿ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಕ್ರಿಸ್’ಮಸ್ ಅಂಗವಾಗಿ ಚರ್ಚ್’ಗಳಿಗೆ ದೀಪಾಲಂಕಾಗಳನ್ನು ಮಾಡಲಾಗಿದ್ದು, ರಾತ್ರಿಯಿಂದಲೇ ಚರ್ಚ್’ಗಳಲ್ಲಿ ವಿಶೇಷ ಪ್ರವಚನ ನಡೆಸಲಾಗುತ್ತಿದೆ. ಯೇಸು ಪ್ರಭುವಿಗೆ ನಮನಗಳನ್ನು ಸಲ್ಲಿಸಲಾಗುತ್ತಿದೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *