Share this news

ನವದೆಹಲಿ: ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿಯ ಮುಂದೆ ಬಾಂಬ್ ಸ್ಪೋಟವಾಗಿ ಆತಂಕ ಸೃಷ್ಟಿಯಾಗಿದೆ‌. ಈ ಮೂಲಕ ರಾಜ್ಯ ರಾಜಧಾನಿ ದೆಹಲಿಯ ಜನರು ಬೆಚ್ಚಿಬಿದ್ದಿದ್ದಾರೆ.

ಈ ಘಟನೆ ಕುರಿತು ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ ಎಂದು ಕರೆ ಬಂದಿದೆ ಎಂದು ಪಿಟಿಐ ವರದಿ ಮಾಡಿದೆ.

ಇದಕ್ಕೊ ಮೊದಲು ಮುಂಬಯಿನ ಆರ್ ಬಿಐ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಸ್ಪೋಟಗೊಳಿಸೋದಾಗಿ ಬೆದರಿಕೆ ಹಾಕಲಾಗಿತ್ತು. 11 ಬ್ಯಾಂಕ್ ಗಳನ್ನು ಗುರಿಯಾಗಿಟ್ಟುಕೊಂಡು ಈ ಇ-ಮೇಲ್ ಅನ್ನು ಮಾಡಲಾಗಿತ್ತು. ಈ ಬೆನ್ನಲ್ಲೇ ದೆಹಲಿಯ ಇಸ್ರೇಲ್ ರಾಯಬಾರ ಕಚೇರಿಯ ಮುಂದೆ ಬಾಂಬ್ ಸ್ಪೋಟಗೊಂಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ದೆಹಲಿಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಈ ಘಟನೆಯ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *