ಬೆಂಗಳೂರು: ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಅಲ್ಲದೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ನೀಡಲಾಗುತ್ತದೆ. ಅದಕ್ಕಾಗಿ ಎಲ್ಲಾ ನಾಯಕರು ಕುಳಿತು ಚರ್ಚೆ ಮಾಡುತ್ತೇವೆ. ನೇಮಕಾತಿ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಭರವಸೆ ಕೊಟ್ಟಿದ್ದಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು
ಜನರ ಬಳಿಗೆ ಸರ್ಕಾರ ಕೊಂಡೊಯ್ಯಲು ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಅಭ್ಯರ್ಥಿಗಳ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚಿಸಲು ಜ.4 ರಂದು ದೆಹಲಿಗೆ ದೆಹಲಿಗೆ ಹೋಗುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜತೆಗೆ ಲೋಕಸಭೆ ಚುನಾವಣೆ ಸಿದ್ಧತೆ ವಿಚಾರವಾಗಿ ಜ. 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ ಎಂದು ಹೇಳಿದರು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ