Share this news

ನವದೆಹಲಿ: ಭಾರತೀಯ ಪ್ರಯಾಣಿಕರಿದ್ದ ಇಂಡಿಯನ್ ಏರ್‌ಲೈನ್ಸ್ ವಿಮಾನವನ್ನು ಅಪಹರಿಸಿ ಕಂದಹಾರ್ ನಲ್ಲಿ ಇರಿಸಿದ ಪ್ರಕರಣದ ಮಾಸ್ಟರ್‌ಮೈಂಡ್ ಉಗ್ರ ಮಸೂದ್ ಅಜರ್‌ನನ್ನು ಪಾಕಿಸ್ತಾನದ ಇಸ್ಲಾಮಾಬಾದಲ್ಲಿ ಅನಾಮಧೇಯ ವ್ಯಕ್ತಿಗಳು ಬಾಂಬ್ ಸ್ಪೋಟಿಸಿ ಹತ್ಯೆಗೈದಿದ್ದಾರೆ ಎಂಬ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈತ ಭಾರತದ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾಗಿದ್ದು, ಇತ್ತೀಚೆಗೆ ಹಲವು ಉಗ್ರರು ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿರುವಂತೆಯೇ ಇವನೂ ನಿಗೂಢ ದಾಳಿಗೆ ಬಲಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಸೋಮವಾರ ಬೆಳಿಗ್ಗೆ 5 ಗಂಟೆಗೆ ನಡೆದ ಸ್ಫೋಟದಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
1999ರಲ್ಲಿ ಪಾಕಿಸ್ತಾನದ ಹರ್ಕತ್ ಉಲ್ ಮುಜಾಹಿದ್ಧಿನ್ ಉಗ್ರ ಸಂಘಟನೆ ಇಂಡಿಯನ್ ಏರ್‌ಲೈನ್ಸ್ ಭಾರತದ ವಿಮಾನವನ್ನು ಅಪಹರಿಸಿ ಭಾರತದ 154 ಜನ ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿಸಿ ಭಾರತದಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದ ನಟೋರಿಯಸ್ ಉಗ್ರ ಮಸೂದ್ ಅಜರ್ ಬಿಡುಗಡೆಗೆ ಬೇಡಿಕೆ ಇಟ್ಟಿತ್ತು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ದೇಶದ ನಾಗರಿಕರ ಪ್ರಾಣರಕ್ಷಣೆಯ ದೃಷ್ಟಿಯಿಂದ ಉಗ್ರ ಮಸೂದ್ ಅಜರ್ ನನ್ನು ಪಾಕಿಸ್ತಾನಕ್ಕೆ ಒಪ್ಪಿಸಿದ್ದರು. ಇದೀಗ ಬರೋಬ್ಬರಿ 24 ವರ್ಷಗಳ ನಂತರ ಅನಾಮಧೇಯ ವ್ಯಕ್ತಿಗೆ ಬಲಿಯಾಗಿದ್ದಾನೆ ಎನ್ನುವ ಸುದ್ಧಿ ವೈರಲ್ ಆಗುತ್ತಿದೆ.
ಇಂತಹ 20ಕ್ಕೂ ಹೆಚ್ಚು ಉಗ್ರರ ಸಾವು ಕೆಲ ತಿಂಗಳಿನಿAದ ಪಾಕ್‌ನಲ್ಲಿ ಸಂಭವಿಸಿದ್ದು, ಅದನ್ನು ಭಾರತದ ಗುಪ್ತಚರ ಇಲಾಖೆ ನಿಖರ ದಾಳಿ ಮಾಡಿಸುತ್ತಿದೆ ಎಂದು ಪಾಕಿಸ್ತಾನದಲ್ಲಿ ಸುದ್ದಿ ಹಬ್ಬಿದೆ. ಆದರೆ ಪಾಕಿಸ್ತಾನ ಮಾತ್ರ ಉಗ್ರನ ಹತ್ಯೆ ಸುದ್ದಿಯನ್ನು ತಳ್ಳಿ ಹಾಕಿದೆ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *