Share this news

ಉಡುಪಿ: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರದ ಲೋಕಾರ್ಪಣೆ ದಿನವನ್ನು ಐತಿಹಾಸಿಕ ಕ್ಷಣವನ್ನು ಆಚರಿಸುವ ಸಲುವಾಗಿ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು,ಜನವರಿ 22 ರಂದು ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯೊಂದಿಗೆ ಭವ್ಯ ರಾಮ ಮಂದಿರವು ಉದ್ಘಾಟನೆಗೊಳ್ಳುತ್ತಿದೆ. ಶ್ರೀರಾಮ ಮಂದಿರದ ಭಕ್ತರ ಭಾವನಾತ್ಮಕ ಮತ್ತು ಧಾರ್ಮಿಕತೆಯ ಐತಿಹಾಸಿಕ ಕ್ಷಣವಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ.ಈ ಪವಿತ್ರ ದಿನವನ್ನು ದೇಶಾದ್ಯಂತ ದೇವಸ್ಥಾನ, ಮಂದಿರ, ಸಂಘ ಸಂಸ್ಥೆಗಳು ಮತ್ತು ಮನೆ ಮನೆಗಳಲ್ಲಿ ರಾಮ ಜ್ಯೋತಿ ಬೆಳಗಿಸುವುದರೊಂದಿಗೆ ವಿಶೇಷ ಪೂಜೆಗಳು, ಭಜನಾ ಹಾಗೂ ಅನ್ನ ಸಂತರ್ಪಣೆಗಳ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ದೀಪಾವಳಿಯ ಹಬ್ಬದಂತೆ ಆಚರಿಸಲು ಕೋಟ್ಯಾಂತರ ಶ್ರೀರಾಮ ಭಕ್ತರು ಇಚ್ಛಿಸಿರುತ್ತಾರೆ. ಅಂದು ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಲಿದೆ.ದೇಶದಾದ್ಯಂತ ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಎಲ್ಲರಿಗೂ ಶ್ರೀರಾಮ ದೇವರ ಸೇವೆಯಲ್ಲಿ ಜನ ಪಾಲ್ಗೊಳ್ಳಲು ಅವಕಾಶ ಸಿಗಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರಕಾರಿ ಸಂಸ್ಥೆ ಹಾಗೂ ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ಸೇರಿದಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಒತ್ತಾಯಿಸಿದ್ದಾರೆ.

ಕೋಟ್ಯಾಂತರ ಭಾರತೀಯರ ಶತಮಾನಗಳ ಕನಸು ಜನವರಿ 22 ರಂದು ನನಸಾಗುತ್ತಿದೆ.
ಹಿಂದೂಗಳ ಶ್ರದ್ಧಾ ಭಕ್ತಿ ಕೇಂದ್ರವಾದ ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯೊಂದಿಗೆ ಭವ್ಯ ರಾಮ ಮಂದಿರವು ಉದ್ಘಾಟನೆಗೊಳ್ಳುತ್ತಿದೆ. ಶ್ರೀರಾಮ ಮಂದಿರದ ಭಕ್ತರ ಭಾವನಾತ್ಮಕ ಮತ್ತು ಧಾರ್ಮಿಕತೆಯ ಐತಿಹಾಸಿಕ ಕ್ಷಣವಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ.ಈ ಪವಿತ್ರ ದಿನವನ್ನು ದೇಶಾದ್ಯಂತ ದೇವಸ್ಥಾನ, ಮಂದಿರ, ಸಂಘ ಸಂಸ್ಥೆಗಳು ಮತ್ತು ಮನೆ ಮನೆಗಳಲ್ಲಿ ರಾಮ ಜ್ಯೋತಿ ಬೆಳಗಿಸುವುದರೊಂದಿಗೆ ವಿಶೇಷ ಪೂಜೆಗಳು, ಭಜನಾ ಹಾಗೂ ಅನ್ನ ಸಂತರ್ಪಣೆಗಳ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ದೀಪಾವಳಿಯ ಹಬ್ಬದಂತೆ ಆಚರಿಸಲು ಕೋಟ್ಯಾಂತರ ಶ್ರೀರಾಮ ಭಕ್ತರು ಇಚ್ಛಿಸಿರುತ್ತಾರೆ. ಸದ್ರಿ ರಾಮ ಮಂದಿರದ ದಿನದದಂದು ಶ್ರೀರಾಮ ದೇವರ ಸೇವೆಯಲ್ಲಿ ಪಾಲ್ಗೊಂಡು ಮತ್ತು ದೇವರ ಕೃಪೆಗೆ ಪಾತ್ರರಾಗಲು ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಲಾ ಕಾಲೇಜು, ಸರಕಾರಿ ಕಛೇರಿ ಹಾಗೂ ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಈ ಮೂಲಕ ಕೋರುತ್ತೇನೆ’ ಎಂದು ಶಾಸಕ ಯಶ್’ಪಾಲ್ ಮನವಿ ಮಾಡಿದ್ದಾರೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *