ಕಾರ್ಕಳ: ಚಾಲಕನ ನಿಯಂತ್ರಣತಪ್ಪಿ ರಿಕ್ಷಾ ಆವರಣ ಗೋಡೆಗೆ ಬಡಿದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ಆನೆಕೆರೆ ಬಳಿ ನಡೆದಿದೆ.
ಕುಕ್ಕುಂದೂರು ಗ್ರಾಮದ ನಕ್ರೆಯ ನಿವಾಸಿ ಹರೀಶ್ ಕುಮಾರ್ ಎಂಬವರು ಗಾಯಗೊಂಡಿದ್ದು, ಅವರು ಆನೆಕೆರೆ ಕಡೆಯಿಂದ ದಾನಶಾಲೆ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಸೈಡ್ ಕೊಡುವಾಗ ರಿಕ್ಷಾ ಚಕ್ರ ರಸ್ತೆಯ ಅಂಚಿಗೆ ಸಿಲುಕಿದ ಪರಿಣಾಮ ರಿಕ್ಷಾ ಏಕಾಎಕಿ ಬಲಬದಿಗೆ ಬಂದು ಕಂಪೌAಡ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಜಖಂಗೊAಡಿದ್ದು, ಚಾಲಕನ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.
ಆನೆಕೆರೆ ದಾನಶಾಲೆಯ ಬಳಿ ಪೈಪ್ ಲೈನ್ ಅಳವಡಿಸಲು ರಸ್ತೆಯನ್ನು ಅಗೆಯಲಾಗಿದ್ದು ಬಳಿಕ ಕಾಮಗಾರಿ ಪೂರ್ಣಗೊಳಿಸದೇ ಹಾಗೆ ಬಿಡಲಾಗಿದ್ದು ಇದು ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ




