Share this news

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ಗಲಭೆ ಪ್ರಕರಣದಲ್ಲಿ ಹಳೆ ಆರೋಪಿ ಎಂದು ಸರ್ಕಾರ ಶ್ರೀಕಾಂತ್ ಪೂಜಾರಿ ಸಹಿತ ಹಲವಾರು ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಂತ ತೀವೃ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವು ದತ್ತಪೀಠ ಹೋರಾಟಗಾರರ ವಿರುದ್ಧದ ಹಳೆ ಪ್ರಕರಣಗಳ ಕುರಿತು ಮರು ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ.
2017ರಲ್ಲಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ಘೋರಿಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ 14 ಮಂದಿಯ ವಿರುದ್ಧ ಕೇಸ್ ದಾಖಲಾಗಿತ್ತು. ಆದರೆ ಈ ಹಿಂದಿನ ಬಿಜೆಪಿ ಸರ್ಕಾರ ಈ ಪ್ರಕರಣದ ತನಿಖೆ ನಡೆಸಿ ಫೈಲ್ ಕ್ಲೋಸ್ ಮಾಡಿತ್ತು, ಆದರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಈ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಇದೀಗ ವಿವಾದದ ಕಿಡಿ ಹೊತ್ತಿಕೊಳ್ಳುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಬರೋಬ್ಬರಿ 7 ವರ್ಷಗಳ ಬಳಿಕ ರಾಜ್ಯ ಸರ್ಕಾರ ಏಕಾಎಕಿ 14 ಮಂದಿ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ರೀ ಓಪನ್ ಮಾಡಿದ್ದು, ಸರ್ಕಾರದ ಸೇಡಿನ ರಾಜಕಾರಣದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮAಡಲರಾಗಿದ್ದಾರೆ.

ದತ್ತಪೀಠ ಹೋರಾಟಗಾರರಾದ ನಾಗೇಂದ್ರ ಪೂಜಾರಿ, ಲೋಕೇಶ್, ಮಹೇಂದ್ರ, ಸಂದೀಪ್, ರಾಮು, ತುಡುಕೂರು ಮಂಜು, ಶಿವರಾಜ್, ಸಂದೇಶ್ ಸೇರಿದಂತೆ 14 ಮಂದಿಯ ವಿರುದ್ಧದ ಕೇಸ್ ರೀ ಓಪನ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಜನವರಿ.8ರಂದು ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *