ಚನ್ನಪಟ್ಟಣ ಜ.5: ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡುತ್ತೇನೆ ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡೇ ಮಾಡುತ್ತೇವೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹಸೇನ್ ರಾಮ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ
ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನದಲ್ಲಿಕಾಂಗ್ರೆಸ್ ಭಾಗಿಯಾದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅತ್ತ ರಾಮಮಂದಿರ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ ನಡೆಯುತ್ತಿರುವ ಹೊತ್ತಿನಲ್ಲೇ ಇತ್ತ ರಾಮೋತ್ಸವದ ಜಪ ಜಪಿಸಿದರು.
ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಅಂತೆಯೇ ರಾಮನ ಪೂಜೆಯನ್ನೂ ಮಾಡ್ತೇನೆ. ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದರು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ