ಹುಬ್ಬಳ್ಳಿ: ವಿವಿಧ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾದ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬರೋಬ್ಬರಿ 30 ವರ್ಷಗಳ ಬಳಿಕ ಬಂಧಿಸಿ ಜೈಲಿಗಟ್ಟಿದ್ದರು. ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ನ್ಯಾಯಾಲಯವು ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿದೆ.
ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ. ಶ್ರೀಕಾಂತ್ ಪೂಜಾರಿ ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದಿದ್ದ ಗಲಭೆ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದರು.ಇದೀಗ ಏಕಾಎಕಿ ಅವರ ಬಂಧನ ವಿರೋಧಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಕೂಡ ನಡೆಸಿದ್ದರು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ