ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ದೊಡ್ಡ ತೀರ್ಪು ನೀಡಿದ್ದು, ಅಪರಾಧಿಗಳನ್ನು ಅಕಾಲಿಕವಾಗಿ ಬಿಡುಗಡೆ ಮಾಡುವ ಆದೇಶವನ್ನು ರದ್ದುಗೊಳಿಸಿದೆ. 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಿರುವುದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರ ವಿಶೇಷ ಪೀಠವು 2023 ರ ಅಕ್ಟೋಬರ್ 12 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತು.
11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಬಿಡುಗಡೆಯ ಬಗ್ಗೆ ನಿರ್ಧರಿಸುವ ಹಕ್ಕು ಮಹಾರಾಷ್ಟ್ರ ಸರ್ಕಾರಕ್ಕೆ ಇದೆಯೇ ಹೊರತು ಗುಜರಾತ್ ಸರ್ಕಾರಕ್ಕಲ್ಲ ಎಂದು ಹೇಳಿದೆ. ಈ ಅಪರಾಧವು ಗುಜರಾತ್ನಲ್ಲಿ ನಡೆದಿದ್ದರೂ, ಮಹಾರಾಷ್ಟ್ರದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಗುಜರಾತ್ ಸರ್ಕಾರಕ್ಕೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.
ಬಿಲ್ಕಿಸ್ ಬಾನು ಪ್ರಕರಣದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15, 2022 ರಂದು ಆಜಾದಿ ಕಾ ಅಮೃತ್ ಮಹೋತ್ಸವ್ ಅಡಿಯಲ್ಲಿ ಬಿಡುಗಡೆ ಮಾಡಿತು. ಇದರ ನಂತರ, ಈ ಪ್ರಕರಣದಲ್ಲಿ 2022 ರ ನವೆಂಬರ್ 30 ರಂದು ಸುಪ್ರೀಂ ಕೋರ್ಟ್`ನಲ್ಲಿ ಎರಡು ಅರ್ಜಿಗಳನ್ನು ಸಲ್ಲಿಸಲಾಯಿತು. ಮೊದಲ ಅರ್ಜಿಯು 11 ಅಪರಾಧಿಗಳನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿತು ಮತ್ತು ಅವರನ್ನು ತಕ್ಷಣ ಜೈಲಿಗೆ ಕಳುಹಿಸಬೇಕೆಂದು ಒತ್ತಾಯಿಸಿತು. ಆದಾಗ್ಯೂ, ಎರಡನೇ ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್ನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಲಾಯಿತು. ಅಪರಾಧಿಗಳ ಬಿಡುಗಡೆಯ ಬಗ್ಗೆ ಗುಜರಾತ್ ಸರ್ಕಾರ ನಿರ್ಧರಿಸುತ್ತದೆ ಎಂದು ಸುಪ್ರೀಂ ಕೋರ್ಟ್ 2023 ರ ಮೇ ತಿಂಗಳಲ್ಲಿ ಹೇಳಿತ್ತು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ