ಬೆಂಗಳೂರು:ಉಡುಪಿ ಅಷ್ಟಮಠದ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರಿಗೆ ಪರ್ಯಾಯಕ್ಕೆ ಅವಕಾಶ ನೀಡದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ
ಅರ್ಜಿದಾರರಾದ ಗುರುರಾಜ ಜೀವನ್ ರಾವ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ಕೃಷ್ಣ ದೀಕ್ಷಿತರ ಹೈಕೋರ್ಟ್ ನ್ಯಾಯ ಪೀಠ ವಿಚಾರಣೆ ನಡೆಸಿ, ವಿದೇಶದಲ್ಲಿ ಜ್ಞಾನಪ್ರಸಾರ ಮಾಡಿದರೆ ತಪ್ಪೇನಿದೆ ಕುವೆಂಪು ಅವರು ಹೇಳಿದಂತೆ ಓ ನನ್ನ ಚೇತನ ಹಾಗೂ ನೀ ಅನಿಕೇತನ ಎನ್ನುವ ಕವಿತೆಯ ಸಾಲನ್ನು ಹೈಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಉಲ್ಲೇಖಿಸಿದೆ, ಧಾರ್ಮಿಕ ಆಚರಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿ ಗುರುರಾಜ್ ಜೀವನ್ ರಾವ್ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ
ಘಟನೆ ಹಿನ್ನೆಲೆ?
2008 ರಲ್ಲಿ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ವಿರೋಧ ವ್ಯಕ್ತವಾದಾಗ ಶೀರೂರು ಶ್ರೀಗಳು ಅವರ ಜೊತೆ ನಿಂತಿದ್ದರು. ಉಳಿದ 6 ಮಠಾಧೀಶರು ಪರ್ಯಾಯದಿಂದ ಅಂತರ ಕಾಯ್ದುಕೊಂಡಿದ್ದರು. ಈ ಮಠಾಧೀಶರೆಲ್ಲ ಈ ಬಾರಿ ಮತ್ತೆ ಪುತ್ತಿಗೆ ಶ್ರೀಗಳ ಪರ್ಯಾಯಕ್ಕೆ ಗೈರಾಗುವ ಸಾಧ್ಯತೆ ಹೆಚ್ಚಾಗಿದೆ. ಉಡುಪಿ ಅಷ್ಟ ಮಠಗಳ ಪರಂಪರೆಯಂತೆ ಅಲ್ಲಿನ ಶ್ರೀಗಳು ಸಮುದ್ರೋಲ್ಲಂಘನ ಮಾಡುವಂತಿಲ್ಲ. ಆದರೆ, ಪುತ್ತಿಗೆ ಶ್ರೀಗಳು ಸಮುದ್ರೋಲ್ಲಂಘನ ಮಾಡಿ ವಿದೇಶ ಪ್ರವಾಸ ಕೈಗೊಂಡಿದ್ದರಿಂದ ಅವರ ಪರ್ಯಾಯ ಪೀಠಾರೋಹಣಕ್ಕೆ 2008ರಲ್ಲಿ ಇತರ ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದರು.
2008ರಲ್ಲಿ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣ ಸಂದರ್ಭದಲ್ಲಿ ದರ್ಬಾರ್, ಕೀ ಹಸ್ತಾಂತರ ಹಾಗೂ ಅಕ್ಷಯ ಪಾತ್ರೆ ಹಸ್ತಾಂತರದಲ್ಲಿಯೂ ಅಸಮಾಧಾನ ವ್ಯಕ್ತವಾಗಿತ್ತು. ಏಕೈಕ ಶೀರೂರು ಮಠವಷ್ಟೇ ಪುತ್ತಿಗೆ ಮಠದ ಪರ ನಿಂತಿತ್ತು.
ಇದೇ ಜನವರಿ 18ರಂದು ಪುತ್ತಿಗೆ ಶ್ರೀಗಳು ಪರ್ಯಾಯ ಪೀಠವನ್ನು ಏರಲಿದ್ದು ಈ ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳು ಗೈರಾಗುವ ಸಾಧ್ಯತೆಯಿದೆ, ಯಾಕೆಂದರೆ ಅವರು ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠ ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಉತ್ತರಪ್ರದೇಶಕ್ಕೆ ತೆರಳಲಿದ್ದಾರೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ