ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದ್ದು,ಈ ಕುರಿತು ಕಾಂಗ್ರೆಸ್ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ.
ಬಿಜೆಪಿ ಹಾಗೂ ಅರೆಸೆಸ್ಸ್ ಲೋಕಸಭಾ ಚುನಾವಣೆಯ ಲಾಭಕ್ಕಾಗಿ ಅಪೂರ್ಣವಾಗಿರುವ ರಾಮ ಮಂದಿರವನ್ನು ಉದ್ಘಾಟಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.
ಪ್ರತಿಷ್ಠಾಪನಾ ಸಮಾರಂಭಕ್ಕೆ ಹಲವಾರು ಉನ್ನತ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತ್ರವಲ್ಲದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಮತ್ತು ಸೀತಾರಾಮ್ ಯೆಚೂರಿ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿತ್ತು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ