ಬೆಂಗಳೂರು : ಬೆಂಗಳೂರಿನ 50 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ದೇವರ ದರುಶನ ಪಡೆಯಲು ವಸ್ತç ಸಂಹಿತೆ ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹ, ಇದೇ ಸಂಪ್ರದಾಯವನ್ನು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಿಗೂ ವಿಸ್ತರಿಸಿ ಕಡ್ಡಾಯ ವಸ್ತçಸಂಹಿತೆಯನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕ ಮೋಹನ್ ಗೌಡ ಹೇಳಿದ್ದಾರೆ.
ಅವರು ಬೆಂಗಳೂರಿನ ವಸಂತ ನಗರದ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ದೇವಸ್ಥಾನಗಳಲ್ಲಿ ಕಡ್ಡಾಯ ವಸ್ತç ಸಂಹಿತೆಯನ್ನು ಸ್ವಾಗತಿಸಿದರು. ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿ ಮಹಾಕಾಲೇಶ್ವರ ದೇವಸ್ಥಾನ, ವಾರಾಣಾಸಿಯ ಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತ್ವಿಕ ವಸ್ತ್ರ ಸಂಹಿತೆ ಜಾರಿಯಿದೆ. ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್ ಸಹ ರಾಜ್ಯದ 211 ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿತ್ತು. ಈಗಾಗಲೇ ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ದ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ಜಾರಿ ಮಾಡಿದೆ. ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡ್ಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ‍್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಮೋಹನ್ ಗೌಡ ಹೇಳಿದ್ದಾರೆ.
ಮೋಹನ್ ಗೌಡ ಮಾತನಾಡಿ, ಬೆಂಗಳೂರಿನ ನಂತರ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವುದಕ್ಕಾಗಿ ವ್ಯಾಪಕ ಅಭಿಯಾನ ನಡೆಸಿ ಭಕ್ತರಲ್ಲಿ ವಸ್ತ್ರ ಸಂಹಿತೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು. ಪ್ರತೀ ದೇವಸ್ಥಾನಗಳ ಮುಂಭಾಗದಲ್ಲಿ ವಸ್ತ್ರ ಸಂಹೀತೆಯ ಫಲಕಗಳನ್ನು ಹಾಕಿ ಜನಪ್ರಭೋಧನೆ ಮಾಡುವುದು, ದೇವಸ್ಥಾನದ ಪಾವಿತ್ರ‍್ಯತೆಯ ರಕ್ಷಣೆ ಮತ್ತು ಭಾರತೀಯ ಸಂಸ್ಕೃತಿಯ ಪಾಲನೆಯಾಗುವ ಉದ್ದೇಶದಿಂದ ದೇವಸ್ಥಾನಕ್ಕೆ ಬರುವ ಭಕ್ತರು ತುಂಡು ಬಟ್ಟೆ ಧರಿಸುವ ಬದಲು, ಭಾರತೀಯ ಸಂಸ್ಕೃತಿಯ ಪಾಲನೆ ಮಾಡಿ ದೇವಸ್ಥಾನ ವ್ಯವಸ್ಥಾಪನೆಗೆ ಸಹಕರಿಸಲು ಜನಜಾಗೃತಿ ಮೂಡಿಸಲಾಗುವುದು.ದೇವಸ್ಥಾನಕ್ಕೆ ಬರುವವರು ಭಾರತೀಯ ಸಾತ್ವಿಕ ಉಡುಪುಗಳನ್ನು ಧರಿಸಬೇಕು. ಮಹಿಳೆಯರು ಚೂಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ, ಓಡಾಣಿ ಮುಂತಾದ ಪಾರಂಪರಿಕ ಸಾತ್ವಿಕ ವೇಷಭೂಷಣಗಳನ್ನು ಧರಿಸಬೇಕು ಮತ್ತು ಪುರುಷರು ಕುರ್ತಾ, ಧೋತಿ, ಲುಂಗಿ ಅಥವಾ ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್‌ಗಳನ್ನು ಧರಿಸಬಹುದು ಎಂದರು
ದೇವಸ್ಥಾನಗಳ ಸಂರಕ್ಷಣೆ, ಸಂಘಟನೆಯ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಸ್ತರದ ಅಧಿವೇಶನಗಳನ್ನು ಮಾಡಿ, ದೇವಸ್ಥಾನಗಳ ಸಂಘಟನೆ ಮಾಡಲಾಗುವುದು. ಅದಲ್ಲದೇ ಹಿಂದೂ ಸಮಾಜಕ್ಕೆ ಹಿಂದೂ ಧರ್ಮದ ಬಗ್ಗೆ ಶಿಕ್ಷಣ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ 50 ದೇವಸ್ಥಾನಗಲ್ಲಿ ಮಕ್ಕಳು, ಸ್ತ್ರೀ-ಪುರುಷರಿಗೆ ನಿಯಮಿತಿವಾಗಿ ಹಿಂದೂ ಧರ್ಮದ ಶಿಕ್ಷಣ ನೀಡುವ ವರ್ಗಗಳ್ನು ಸಹ ಪ್ರಾರಂಭ ಮಾಡಲಾಗುವುದು. ಇದಕ್ಕೆ ಸಂಬAದಿಸಿ ಒಂದು ಪಠ್ಯಕೃಮವನ್ನು ಸಹ ರಚಿಸಲಾಗಿದೆ. ಈಗಾಗಲೇ ರಾಜ್ಯದ 300 ಸ್ಥಳಗಳಲ್ಲಿ ಈ ವರ್ಗ ಪ್ರಾರಂಭಿಸಲಾಗಿದೆ. ಮುಂದೆ ಪ್ರತಿ ದೇವಸ್ಥಾನಗಳಲ್ಲಿ ಹಿಂದೂ ಧರ್ಮ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದರು
ಈ ವೇಳೆ ಸುದ್ದಿಗೋಷ್ಠಿಯಲ್ಲಿ ರಾಜಾಜಿನಗರದ ವೈಕುಂಠ ಮಹಾಕ್ಷೇತ್ರದ ಅಧ್ಯಕ್ಷ ಹೆಚ್.ವಿ ಹರೀಶ್, ರಾಜಾಜಿನಗರದ ವಾಸವಿ ದೇವಸ್ಥಾನಗಳ ಕಾರ್ಯದರ್ಶಿ ಶ್ರೀ. ಎ.ಎಸ್.ಎನ್ ಗುಪ್ತ, ರಾಷ್ಟ್ರೀಯ ಅಸಂಘಟಿತ ಪುರೋಹಿತ ಕಾರ್ಮಿಕ ಪರಿಷತ್ ನ ರಾಷ್ಟ್ರೀಯ ಕಾರ್ಯದರ್ಶಿ ಡಾ. ಬಿ.ಎನ್ ಮಹೇಶ್ ಕುಮಾರ್, ವಸಂತನಗರದ ಲಕ್ಷ್ಮಿನರಸಿಂಹ ದೇವಸ್ಥಾನದ ಅಧ್ಯಕ್ಷ ಡಾ. ಶಿವರಾಮ್, ಮೆಜೆಸ್ಟಿಕ್ ನಲ್ಲಿರುವ ನಾಗಲಿಂಗೇಶ್ವರ ಶ್ರೀಸಾಯಿ ದೇವಸ್ಥಾನದ ಮಹಾದೇವ, ರಾಮಾನುಜ ಪೀಠಂನ ಉಪಾಧ್ಯಕ್ಷ ಎಸ್. ಜಯರಾಮ್, ಬೆಳ್ತಂಗಡಿಯ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಕೃಷ್ಣ ಸಂಪಿಗೆತ್ತಾಯ, ಶಿವಾಜಿನಗರದ ಆಂಜನೇಯ ದೇವಸ್ಥಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಶರತ್ ಕುಮಾರ್ ಸೇರಿದಂತೆ 15 ಕ್ಕೂ ಹೆಚ್ಚು ದೇವಸ್ಥಾನಗಳ ವಿಶ್ವಸ್ಥರು ಉಪಸ್ಥಿತರಿದ್ದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ