ಶಿವಮೊಗ್ಗ: ರಾಮ ಮಂದಿರದ ಲೋಕಾರ್ಪಣೆ ವಿಚಾರದಲ್ಲಿ ಕಾಂಗ್ರೆಸ್ ಅಂತರ ಕಾಯ್ದುಕೊಂಡ ವಿಚಾರದಲ್ಲಿ ಬಿಜೆಪಿ ನಾಯಕರ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾವೂ ಕೂಡ ರಾಮ ಭಕ್ತರೇ, ಆದರೆ ಶ್ರೀರಾಮಚಂದ್ರನನ್ನು ಬಳಸಿಕೊಂಡು ಬಿಡೆಪಿ ರಾಜಕೀಯ ಮಾಡುವುದನ ನು ವಿರೋಧಿಸುತ್ತೇವೆ ಜ.22ರ ನಂತರ ನಾವೂ ಕೂಡ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ನೀಡಿದರು
ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ.ಮಂದಿರ ಲೋಕಾರ್ಪಣೆಯ ನಂತರ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದರು. ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ. ಬಿಜೆಪಿ ನಾಯಕರು ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಮತಗಳಿಸುವ ಲೆಕ್ಕಾಚಾರದಲ್ಲಿದ್ದು ಅವರ ಈ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದರು
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ