Share this news

ಹೆಬ್ರಿ:ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಶವ ಹಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹೆಬ್ರಿ ತಾಲೂಕಿನ ವರಂಗ ಗ್ರಾಮದ ನೀರಪಲ್ಕೆಯ ನಿವಾಸಿ ಪುಟ್ಟು (63) ಎಂಬವರು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದರು.
ಇವರ ಶವ ಭಾನುವಾರ ಸಂಜೆ ವರಂಗ ಗ್ರಾಮದ ಮುನಿಯಾಲು ನೀರಪಲ್ಕೆಯಲ್ಲಿರುವ ಅವರ ಮನೆಯ ಹತ್ತಿರದ ಸರಕಾರಿ ಹಾಡಿಯಲ್ಲಿರುವ ಮರದ ಕೊಂಬೆಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವು ಸಂಪೂರ್ಣ ಕೊಳೆತು‌ಹೋಗಿದ್ದು,ನಾಪತ್ತೆಯಾದ ದಿನವೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *