Share this news
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಪರಿಶಿಷ್ಟ ಜಾತಿಗೆ(SC) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಜ್ಜಾಗಿದೆ.

ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ.ಈ ಕುರಿತು ಮಾಹಿತಿ ನೀಡಿದ ಸಚಿವ ಎಚ್.​ಕೆ ಪಾಟೀಲ್ ಹಾಗೂ ಎಚ್​ಸಿ ಮಹಾದೇವಪ್ಪ, “ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇನ್ನು ಹೊಸ ಜನಗಣತಿ ಪ್ರಕಾರ ಮೀಸಲಾತಿ ಪರಿಷ್ಕರಿಸಲು ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ನೀಡುವಂತೆ ಮತ್ತು ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *