ಪಾಟ್ನಾ(ಜ.28) ಕಳೆದ ಕೆಲ ದಿನಗಳಿಂದ ಬಿಹಾರದ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ. ಬಿಜೆಪಿ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಇದೀಗ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಗೆ ಮೈತ್ರಿಗೆ ಮರಳಿದ್ದಾರೆ. ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಇಂದು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನತೀಶ್ ಕುಮಾರ್ ಇದೀಗ 9ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೆಕಾರ್ ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. 2020ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಕೂಟದಲ್ಲಿದ್ದ ನಿತೀಶ್ ಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಎನ್‌ಡಿಎ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರು. ಇದೀಗ ಈ ಮೈತ್ರಿ ತೊರೆದು ಮತ್ತೆ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ.
ನಿತೀಶ್ ಕುಮಾರ್ ಜೊತೆ ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ವಿಜಯ್ ಸಿನ್ಹಾ ಹಾಗೂ ಸಮರ್ಥ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ