ಬೆಂಗಳೂರು :ದಲಿತ ರಾಷ್ಟ್ರಪತಿಯನ್ನು ಏಕವಚನದಲ್ಲಿ ಸಂಭೋದಿಸಿ ಪೇಚಿಗೆ ಸಿಲುಕಿದ ಸಿದ್ದರಾಮಯ್ಯ ಅವರು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಆದರೆ ಸಿದ್ದರಾಮಯ್ಯನವರ ಇದೇ ವೈಫಲ್ಯವನ್ನು ಬಂಡವಾಳ ಮಾಡಿಕೊಂಡ ಕುಮಾರಸ್ವಾಮಿ, ಗೌರವಾನ್ವಿತ ರಾಷ್ಟ್ರಪತಿ ದಲಿತ ಮಹಿಳೆ ಎನ್ನುವ ಕಾರಣಕ್ಕಾಗಿ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಮಾನ ಮಾಡಲಾಗಿದೆ.ಆದ್ದರಿಂದ ತಕ್ಷಣವೇ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ
ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು. ಚಾಮರಾಜನಗರದಲ್ಲಿ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರರವರು ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ