ದಾವಣಗೆರೆ: ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಕಳೆದ ವಾರ ಕೇಂದ್ರದ ಬಜೆಟ್ ಮಂಡನೆ ಕುರಿತಂತೆ ಪತ್ರಕರ್ತರು ಸಂಸದ ಡಿಕೆ ಸುರೇಶ್ ಅವರ ಪ್ರತಿಕ್ರಿಯೆ ಕೇಳಿದಾಗ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಅನುದಾನ ನೀಡದೇ ಅನ್ಯಾಯವಾಗಿದೆ. ಇದರಿಂದ ನಾವು ದಕ್ಷಿಣ ಭಾರತ ಪ್ರತ್ಯೇಕ ರಾಷ್ಟç ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಹುದು ಎಂಬ ಹೇಳಿಕೆ ನೀಡಿದ್ದರು. ಈಶ್ವರಪ್ಪ ಅವರು ಡಿ.ಕೆ ಸುರೇಶ್ ಅವರನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಈಶ್ವರಪ್ಪ ಹೇಳಿಕೆಯನ್ನೇ ಅಸ್ತçವನ್ನಾಗಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ಈ ಕುರಿತಂತೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ದೇಶವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದಂತ ಕೆ.ಎಸ್ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು




ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ





