ಹೆಬ್ರಿ: ವಿದ್ಯುತ್ ಕಂಬಕ್ಕೆ ಆಂಬುಲೆನ್ಸ್ ವಾಹನ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾದ ಘಟನೆ ಮಂಗಳವಾರ ಮುಂಜಾನೆ ಮುನಿಯಾಲಿನ ಜಂಗಮೇಶ್ವರ ಮಠದ ಕ್ರಾಸ್ ಬಳಿ ಸಂಭವಿಸಿದೆ.
ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಆಸ್ಪತ್ರೆಯ ಆಂಬುಲೆನ್ಸ್ ಇದಾಗಿದ್ದು, ವಾಹನದಲ್ಲಿ ಚಾಲಕ ಹಾಗೂ ಸಹಾಯಕ ಮಾತ್ರ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮುಂಜಾನೆ 6.15ರ ವೇಳೆಗೆ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಂಬ ತುಂಡಾಗಿದೆ. ನಿದ್ದೆಗಣ್ಣಿನಲ್ಲಿ ಈ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಅಪಘಾತದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು ಬಳಿಕ ವಿದ್ಯುತ್ ಪೂರೈಕೆ ಸ್ಥಗಿತವಾದ ಹಿನ್ನಲೆಯಲ್ಲಿ ಚಾಲಕ ಹಾಗೂ ಸಹಾಯಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ