ಕಾರ್ಕಳ: ನ್ಯಾಯಾಲಯದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಾಕ್ಷಿ ನುಡಿಯಲು ಹೋಗಿದ್ದ ಸಾಕ್ಷಿದಾರನಿಗೆ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಕಾರ್ಕಳದ ಅನಂತಶಯನದ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ನಡೆದಿದ್ದು, ಕಾರ್ಕಳ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ
ದುರ್ಗ ಗ್ರಾಮದ ಕೆಳಗಿನ ಪರನೀರು ನಿವಾಸಿ ದಿನೇಶ್(52) ಎಂಬವರು ಹಲ್ಲೆಗೊಳಗಾದ ವ್ಯಕ್ತಿ. ಅವರು ಪ್ರಕರಣದ ಒಂದರ ವಿಚಾರಣೆ ಸಂದರ್ಭದಲ್ಲಿ ಕೋರ್ಟಿನಲ್ಲಿ ಸಾಕ್ಷಿ ಹೇಳಲು ಹೋಗಿದ್ದ ಸಂದರ್ಭದಲ್ಲಿ ಗುರಾಯಿಸಿದ ಹಲ್ಲೆ ಆರೋಪಿ ರತ್ನಾಕರ ಇದನ್ನೇ ನೆಪವಾಗಿಸಿ. ದಿನೇಶ್ ಪೂಜಾರಿ ಸೋಮವಾರ ರಾತ್ರಿ 11 ಗಂಟೆಯ ವೇಳೆ ಅನಂತಶಯನದ ಪಾನ್ ಶಾಪ್ ಒಂದರ ಬಳಿ ತನ್ನ ರಿಕ್ಷಾ ನಿಲ್ಲಿಸಿ ಬೀಡಾ ತಿನ್ನುವಾಗ ರತ್ನಾಕರ ಹಾಗೂ ಆತನ ಇಬ್ಬರು ಸ್ನೇಹಿತರ ಕಾರಿನಲ್ಲಿ ಬಂದು ಅಡ್ಡಗಟ್ಟಿ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ್ದಾರೆ ಅಲ್ಲದೇ ಸಾಕ್ಷಿ ಹೇಳಿದ ನಿನ್ನನ್ನು ಕೊಲೆ ಮಾಡದೇ ಬಿಡುವುದಿಲ್ಲ ಎಂದು ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ದಿನೇಶ್ ಪೂಜಾರಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ