Share this news

ಬೆಂಗಳೂರು: ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಲಾಗಿತ್ತು. ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೇ, ರಾಜ್ಯ ಸರ್ಕಾರ ಈ ಆದೇಶವನ್ನು ವಾಪಾಸ್ ಪಡೆದಿದೆ.

ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಹಿಂಪಡೆದ ಆದೇಶ ಮಾಡಲಾಗಿದ್ದು, ವಸತಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ಹೇರಿದ್ದ ನಿರ್ಬಂಧದ ಆದೇಶವನ್ನು ವಾಪಾಸ್ ಪಡೆದಿರೋದಾಗಿ ತಿಳಿಸಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರವೇ ಆಚರಿಸುವಂತೆ ತಿಳಿಸಲಾಗಿತ್ತು.

ಈ ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ಹೊರಡಿಸಿದೆ. ಆ ಸುತ್ತೋಲೆಯಲ್ಲಿ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ಆಚರಿಸಬೇಕು. ಧಾರ್ಮಿಕ ಹಬ್ಬ ಆಚರಿಸದಂತೆ ಸೂಚಿಸಲಾಗಿತ್ತು.ಒಂದು ವೇಳೆ ಈ ಆದೇಶ ಉಲ್ಲಂಘಿಸಿ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಿದ್ರೇ ಪ್ರಾಂಶುಪಾಲರು, ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿತ್ತು.

ಅಂದಹಾಗೇ ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾಂತಿ, ಯುಗಾದಿ, ರಂಜಾನ್ ಸೇರಿದಂತೆ ವಿವಿಧ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂಬುದಾಗಿ ಸುತ್ತೋಲೆಯ ಆದೇಶದಲ್ಲಿ ತಿಳಿಸಲಾಗಿತ್ತು.

ಇದೀಗ ಈ ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಾಸ್ ಪಡೆಯಲಾಗಿದೆ. ಈ ಮೂಲಕ ವಿವಾದಕ್ಕೆ ಬ್ರೇಕ್ ಹಾಕಲಾಗಿದೆ.

 

 

Leave a Reply

Your email address will not be published. Required fields are marked *