Share this news

ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಪಿಎಂ ಎಚ್. ಡಿ ದೇವೇಗೌಡ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ.

ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. 90 ವರ್ಷದ ಎಚ್‌ಡಿ ದೇವೇಗೌಡ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ

 

 

Leave a Reply

Your email address will not be published. Required fields are marked *