ಉಡುಪಿ : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ನಾನು ಸ್ಪರ್ಧಿಸಲಿದ್ದು, ಉಳಿದಂತೆ 5-6 ಕ್ಷೇತ್ರಗಳಿಗೆ ನನ್ನ ಹೆಸರು ಕೇಳಿ ಬರುತ್ತಿವೆ ಎಂದು ಹೇಳಿದ್ದಾರೆ
ದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ.
ಉಡುಪಿ ಹಾಗೂ ಚಿಕ್ಕಮಂಗಳೂರು ಕ್ಷೇತ್ರಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಇದರ ಆಧಾರದ ಮೇಲೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಮತ್ತೊಮ್ಮೆ ಉಡುಪಿ ಮತ್ತು ಚಿಕ್ಕಮಗಳೂರು ಜನರು ಆಶೀರ್ವಾದ ಮಾಡಿ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ