Share this news

ರಾಮನಗರ :ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತಿಗೊಳಿಸಬೇಕೆಂದು ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಸರ್ಕಾರ ಕೊನೆಗೂ ಮಣಿದಿದ್ದು, ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಪಿಎಸ್ಐ ತನ್ವೀರ್ ಹುಸೇನ್ ಅವರು 40 ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿದ ವಿಚಾರದಲ್ಲಿ ವಕೀಲರು ರಾಮನಗರ ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಪಿಎಸ್ಐ ಅಮಾನತಿಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು.ಇವರ ಪ್ರತಿಭಟನಗೆ ಬಿಜೆಪಿ ಹಾಗೂ ಜೆಡಿ ಎಸ್ ನಾಯಕರು ಕೈಜೋಡಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ವಕೀಲರ ಪ್ರತಿಭಟನೆ ವಿಚಾರ ಸದನದಲ್ಲಿಯೂ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ಕೆಂಡಕಾರಿದ ಹಿನ್ನೆಲೆಯಲ್ಲಿ ಪಿಎಸ್ಐ ತನ್ವೀರ್ ಹುಸೇನನ್ನು ಸರ್ಕಾರದ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ

 

Leave a Reply

Your email address will not be published. Required fields are marked *