Share this news

ಬೆಂಗಳೂರು :ಶಾಲೆಗಳಿಂದ ದೂರ ಉಳಿಯುವ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ. ರಾಜ್ಯದ 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮ ಚಾಲನೆ ನೀಡಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಶಾಲಾ ಮಕ್ಕಳಿಗೆ ಹಾಲು, ಮೊಟ್ಟೆ ಹಾಗೂ ನೆಲಗಡಲೆ ಚಿಕ್ಕಿ ವಿತರಿಸಲಾಗುತ್ತಿದ್ದು ಇದಕ್ಕೆ ರಾಗಿ ಮಾಲ್ಟ್‌‌ ಸೇರ್ಪಡೆಯಾಗಿದ್ದು ಮಕ್ಕಳ ಮುಖದಲ್ಲಿ ಖುಷಿ ಮೂಡಿದೆ  

Leave a Reply

Your email address will not be published. Required fields are marked *