ಕಾರ್ಕಳ: ರಾಜ್ಯ ಬಿಹೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲಾ ಹಾಲಿ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಕಳ ಇವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ವಿಖ್ಯಾತ್ ಶೆಟ್ಟಿ ಯವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ವಿಖ್ಯಾತ್ ಶೆಟ್ಟಿ ಬಾಲ್ಯದಿಂದಲೇ ಆರೆಸ್ಸೆಸ್ ಸಂಘ ಶಾಖೆಗೆ ಸೇರಿ ಬಳಿಕ ಕಾಲೇಜು ದಿನಗಳಲ್ಲಿ ಎಬಿವಿಪಿ ಸಂಘಟನೆಯಲ್ಲಿ ಸಕ್ರೀಯ ಸದಸ್ಯರಾಗಿ ಬಳಿಕ ಕಾರ್ಕಳ ತಾಲೂಕು ಯುವಮೋರ್ಚಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದಾದ ಬಳಿಕ ಯುಮೋರ್ಚಾ ಉಡುಪಿ ಜಿಲ್ಲಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಕಷ್ಟು ಹೋರಾಟಗಳಲ್ಲಿ ಸಕ್ರೀಯರಾಗಿ ಭಾಗವಹಿಸಿ ಪಕ್ಷ ಸಂಘಟನೆಯಲ್ಲಿ ಶ್ರಮಿಸಿರುವ ಹಿನ್ನಲೆಯಲ್ಲಿ ಅವರ ಸಾಧನೆ ಗುರುತಿಸಿ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.


