Share this news

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸಿನ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ನೌಕರರಿಗೆ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾತರಿಗಳ ಅನುಷ್ಠಾನಕ್ಕೆ ಹಣಕಾಸಿನ ಬದ್ಧತೆಯ ಹೊರತಾಗಿಯೂ, 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಆಯೋಗದ ಅಂತಿಮ ವರದಿಗಾಗಿ ಕಾಯುತ್ತಿದ್ದೇವೆ, ಕೇಂದ್ರ ಸರ್ಕಾರ ನಿರ್ಧಾರದಂತೆ ತುಟ್ಟಿಭತ್ಯೆ ನೀಡುತ್ತಿದ್ದೇವೆ ಎಂದು ಸಿಎಂ ಹೇಳಿದರು.
ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರುವ ಬಗ್ಗೆ ಸರ್ಕಾರ ಚರ್ಚೆ ನಡೆಸುತ್ತಿದೆ ಎಂದರು. ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಸಿಎಂ ಹೇಳಿದರು. ಸಾರ್ವಜನಿಕರ ಕೆಲಸವನ್ನು ಆದ್ಯತೆಯ ಮೇರೆಗೆ ಬದ್ದತೆಯಿಂದ ಕಾರ್ಯ ನಿರ್ವಹಿಸಬೇಕೆಂದು ನೌಕರರಿಗೆ ಸಿಎಂ ಕಿವಿಮಾತು ಹೇಳಿದರು

             

Leave a Reply

Your email address will not be published. Required fields are marked *