ಕಾರ್ಕಳ: ಕಾರ್ಕಳ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಾರ್ಕಳ ತಾಲೂಕಿನ ಬೈಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.4 ರಂದು ಸೋಮವಾರ ಸಂಜೆ 5.30ಕ್ಕೆ ನಡೆಯಲಿದೆ.
ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್, ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾ ಪರಿಷತ್ ಸದಸ್ಯರಾದ ಎಸ್ ಎಲ್. ಭೋಜೆ ಗೌಡ, ಡಾ। ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ। ಎಂ.ಟಿ. ರೇಜು,ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ಅಧೀಕ್ಷಕ ಡಾ| ಅರುಣ ಕೆ. ಕಾರ್ಕಳ ತಹಸೀಲ್ದಾರ್ ನರಸಪ್ಪ, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಬೆಳ್ಳುಂಡುಗಿ, ಬೈಲೂರು ಪಂಚಾಯತ್ ಪಿಡಿಒ ವಿದ್ಯಾ, ಕಾರ್ಯದರ್ಶಿ ಗಣೇಶ್ ಉಪಸ್ಥಿತರಿರಲಿದ್ದಾರೆ ಎಂದು ಬೈಲೂರು ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಚಾಯತ್ ಅಧ್ಯಕ್ಷೆಯಾಗಿ ಸುಜಾತ,ಉಪಾಧ್ಯಕ್ಷರಾಗಿ ಸಂತೋಷ್, ಸದ್ಯಸರಾಗಿ ಅಶ್ವಿತಾ ಶೆಟ್ಟಿ, ಶ್ವೇತಾ ಪಿ. ಶೆಟ್ಟಿ, ಶಾಲಿನಿ, ಸುನಂದಾ ಡಿ. ನಾಯಕ್, ವಿಶ್ವೇಶ್ ದೇವಾಡಿಗ, ಮಾಲತಿ, ಶಶಿ ಕುಮಾರ್, ಜಗದೀಶ ಪೂಜಾರಿ, ದೀಕ್ಷಿತಾ ಶೆಟ್ಟಿ, ಉದಯ ಶೆಟ್ಟಿ, ಉದಯ ನಾಯಕ್ ಹಾಗೂ ಶಾಂತಾ ನಾಯ್ಕ್ ಕಾರ್ಯನಿರ್ವಹಿಸುತ್ತಿದ್ದಾರೆ.
ಸಭಾ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ 7.30 ರಿಂದ ದೇವದಾಸ್ ಕಾಪಿಕಾಡ್ ನಿರ್ದೇಶನದ ಪುದರ್ ದೀದಾಂಡ್ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.