Share this news

ಬೆಂಗಳೂರು:ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣವು ಅತ್ಯಂತ ಗಂಭೀರ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ
ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆಯನ್ನು ಎನ್ಐಎ ಆರಂಭಿಸಲಿದ್ದು,ಈ ಪ್ರಕರಣದ ಕುರಿತು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿದೆ‌. ಈ ಪ್ರಕರಣದಲ್ಲಿ ರಾಜ್ಯ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಈ ಪ್ರಕರಣದ ತನಿಖೆ ನಡೆಯಲಿದ್ದು, ಎನ್ಐಎ ತನಿಖೆ ನಡೆಸುವು ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಭಾಗಿಯಾದ ಪಾತಕಿಗಳ ಎದೆಯಲ್ಲಿ ನಡುಕ ಆರಂಭವಾಗಿದೆ.

 

 

 

 

Leave a Reply

Your email address will not be published. Required fields are marked *