ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಲೇಜೊಂದರ ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿದ ಅಮಾನುಷ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ಕೇರಳದ ಮಲಪ್ಪುರಂ ಜಿಲ್ಲೆಯ ಅಬೀನ್ (21) ಎಂಬಾತನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ವಿದ್ಯಾರ್ಥಿನಿಯರಾದ ಅಲಿನಾ, ಸಿಬಿ ಅರ್ಚನಾ, ಹಾಗೂ ಅಮೃತಾ ಕಾಲೇಜಿನ ವರಾಂಡದಲ್ಲಿ ಕುಳಿತಿದ್ದ ವೇಳೆ ಅಬೀನ್ ಶಾಲಾ ಸಮವಸ್ತ್ರ ಹಾಗೂ ಮುಖಕ್ಕೆ ಕಪ್ಪುಬಣ್ಣದ ಮಾಸ್ಕ್ ಧರಿಸಿ ಬಂದು ಏಕಾಎಕಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.ಈ ಘಟನೆಯಿಂದ ವಿದ್ಯಾರ್ಥಿನಿ ಅಲಿನಾ ಮುಖಕ್ಕೆ ಗಂಭೀರ ಸುಟ್ಟ ಗಾಯಗಳಾಗಿವೆ. ಈ ದಾಳಿಯಿಂದ ಇನ್ನಿಬ್ಬರು ವಿದ್ಯಾರ್ಥಿನಿಯರಾದ ಅರ್ಚನಾ ಹಾಗೂ ಅಮೃತಾ ಎಂಬವರಿಗೂ ಸುಟ್ಟ ಗಾಯಗಳಾಗಿವೆ.
ತೀವ್ರವಾಗಿ ಗಾಯಗೊಂಡು ಅಲೀನಾಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಳಿದ ಇಬ್ಬರು ವಿದ್ಯಾರ್ಥಿನಿಯರನ್ನು
ಸ್ಥಳೀಯ ಕಡಬ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದ, ತೀವ್ರವಾಗಿ ಗಾಯಗೊಂಡ ಯುವತಿ ಕೇರಳ ಮೂಲದ ಮಲಪ್ಪುರಂ ನಿವಾಸಿಯಾಗಿದ್ದು, ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಯುವಕ ಅಬೀನ್ ಈ ದಾಳಿ ನಡೆಸಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.